ಬೆಂಗಳೂರು: ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡು ಗಂಟಲು ದ್ರವ ಪರೀಕ್ಷೆಗೆ ಕೊಟ್ಟವರು ವರದಿ ಬರುವವರೆಗೂ ಪ್ರತ್ಯೇಕವಾಗಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಸುತ್ತೋಲೆ ಹೊರಡಿಸಿದೆ.

ಕೋವಿಡ್ ಮಾದರಿ ಪರೀಕ್ಷೆಗೆ ಒಳಪಟ್ಟವರುಪ್ರಯೋಗಾಲಯದಿಂದ ವರದಿ ಬರುವವರೆಗೂ ಪ್ರತ್ಯೇಕವಾಗಿರುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಮಾದರಿಯನ್ನು ನೀಡಿದವರು ವರದಿ ಬರುವವರೆಗೂ ಹೊರಗಡೆ ಹೊಗುವಂತಿಲ್ಲ, ಸಮುದಾಯದಲ್ಲಿ ಸೇರುವಂತಿಲ್ಲ, ಕೆಲಸಕ್ಕೂ ಹೋಗುವಂತಿಲ್ಲ. ಒಂದು ವೇಳೆ ಬೇಜವಾಬ್ದಾರಿಯಿಂದ ನಡೆದುಕೊಂಡರೆ ಸಂಕ್ರಾಮಿಕ ರೋಗಗಳ ಕಾಯ್ದೆ ಅನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು ಸರ್ಕಾರ ಎಚ್ಚರಿಸಿದೆ.

ಮಾದರಿ ಕೊಟ್ಟವರು ಹೊರಗಡೆ ತಿರುಗಾಡಿದರೆ, ಕೆಲಸಕ್ಕೆ ಹಾಜರಾದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯಗಳಿರುವುದರಿಂದ ಅವರುಪ್ರತ್ಯೇಕವಾಗಿರುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.