ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಗಮ ಮಂಡಳಿ: ಆಯ್ಕೆ ಸಮಿತಿ ರಚನೆ

Published 9 ಜುಲೈ 2024, 23:30 IST
Last Updated 9 ಜುಲೈ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ನಿಗಮ–ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ಆಯ್ಕೆ ಮಾಡಲು ಗೃಹ ಸಚಿವ ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಸತೀಶ ಜಾರಕಿಹೊಳಿ, ಸಂತೋಷ್‌ ಎಸ್‌.ಲಾಡ್‌, ಶರಣಪ್ರಕಾಶ ಪಾಟೀಲ ಅವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕರಾದ ರಿಜ್ವಾನ್‌ ಅರ್ಷದ್‌ ಮತ್ತು ಎಂ. ರೂಪಕಲಾ, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ವಿ.ಆರ್.ಸುದರ್ಶನ್‌ ಮತ್ತು ಕೆ.ಹರೀಶ್‌ಕುಮಾರ್ ಅವರನ್ನು ಆಯ್ಕೆ ಸಮಿತಿ ಒಳಗೊಂಡಿದೆ.

ಜೂನ್ 24ರಂದು ಪರಮೇಶ್ವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯಲ್ಲಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಅವರು ಸದಸ್ಯರಾಗಿದ್ದರು. ಈಗ ಮತ್ತೆ ನಾಲ್ವರು ಸಚಿವರನ್ನು ಸಮಿತಿಗೆ ಸೇರ್ಪಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT