ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮ- ಮಂಡಳಿ: ಮೊದಲ ಬಾರಿ ಶಾಸಕರಾದವರಿಗೆ ಸ್ಥಾನ ಇಲ್ಲ- ಡಿ.ಕೆ. ಶಿವಕುಮಾರ್‌

Published 29 ನವೆಂಬರ್ 2023, 7:19 IST
Last Updated 29 ನವೆಂಬರ್ 2023, 7:19 IST
ಅಕ್ಷರ ಗಾತ್ರ

ಬೆಂಗಳೂರು: ‘ಮೊದಲ ಬಾರಿ ಶಾಸಕರಾದವರಿಗೆ ನಿಗಮ- ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ಕೊಡುತ್ತೇವೆ’ ಎಂದರು.

‘ನಾನು, ಮುಖ್ಯಮಂತ್ರಿ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ ಅವರು ಹೈಕಮಾಂಡ್ ಬಳಿಗೆ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ’ ಎಂದರು.

’ತೆಲಂಗಾಣ ಚುನಾವಣೆ ಪ್ರಚಾರ  ಬುಧವಾರ ಮುಗಿಯಲಿದೆ. ಆದಷ್ಟು ಬೇಗ ನಿಗಮ– ಮಂಡಳಿ ನೇಮಕ ಪಟ್ಟಿ ಬಿಡುಗಡೆ ಆಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT