ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮ–ಮಂಡಳಿ: ತಾತ್ಕಾಲಿಕ ಪಟ್ಟಿ ಪ್ರಕಟ

Published 22 ಏಪ್ರಿಲ್ 2024, 22:08 IST
Last Updated 22 ಏಪ್ರಿಲ್ 2024, 22:08 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.

ಆರು ನಿಗಮ- ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,17,961 ಅಭ್ಯರ್ಥಿಗಳು ಪಡೆದ ಅಂಕಗಳನ್ನು ಪಟ್ಟಿ ಒಳಗೊಂಡಿದೆ. 

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ 41 ಹುದ್ದೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ 386, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 186, ಎಂಎಸ್ಐಎಲ್‌ನ 72, ಕಿಯೋನಿಕ್ಸ್‌ನ 26, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆಗಳು ಸೇರಿದಂತೆ ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಏ.29ರ ಒಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT