ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ರವಿಕುಮಾರ್ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಭೂ ಒಡೆತನ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಂದ ಶೇ 60ರಷ್ಟು ಲಂಚ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ’ ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಮೌರ್ಯ ಆರೋಪಿಸಿದ್ದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರವಿಕುಮಾರ್ ಅವರು ಭೋವಿ ಸಮುದಾಯವನ್ನು ಪ್ರತಿನಿಧಿಸುತ್ತಿದ್ದು, ಸಮುದಾಯದ ಜನರ ಅಭಿವೃದ್ಧಿಗೆ ಇರುವ ಯೋಜನೆಗಳನ್ನು ಹಂಚಿಕೆ ಮಾಡಲು ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಇವರು ಫಲಾನುಭವಿಗಳಿಂದ ಲಂಚ ಪಡೆದುಕೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದ್ದರು.

‘ರವಿಕುಮಾರ್ ಅವರು ನಿಗಮದಲ್ಲಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವುದನ್ನು ಬಿಟ್ಟು, ಮಧ್ಯವರ್ತಿಗಳ ಮೂಲಕ ಹಣ ನೀಡುವಂತೆ ಫಲಾನುಭವಿಗಳಿಗೆ ಪೀಡಿಸುತ್ತಿದ್ದಾರೆ. ಈ ಬಗ್ಗೆ ಅವರು ಮಾತನಾಡಿರುವ ವಿಡಿಯೊ ಹಾಗೂ ಆಡಿಯೊಗಳು ನನ್ನ ಬಳಿ ಇವೆ. ಕೂಡಲೇ ರವಿಕುಮಾರ್ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು. ಅವರ ವಿರುದ್ಧ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೊ ಮತ್ತು ಆಡಿಯೊ ಹರಿದಾಡಿದವು.

ಭೋವಿ ಅಭಿವೃದ್ಧಿ ನಿಗಮದಲ್ಲಿ ಶೇ 60 ಕಮೀಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪ ಮಾಡಿದವರು ದಾಖಲೆಗಳನ್ನು ಸಲ್ಲಿಸಲಿ, ಸರ್ಕಾರ ತನಿಖೆ ಮಾಡುತ್ತದೆ.
–ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ

ಭೂಮಿ ಮಂಜೂರಾದವರಿಗೆ ₹25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ₹5 ಲಕ್ಷ ಕಮಿಷನ್ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು.
–ನಿಖಿಲ್ ಕುಮಾರಸ್ವಾಮಿ, ಯುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.