ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕೋಟ ಶ್ರೀನಿವಾಸ ಪೂಜಾರಿಯಿಂದ ಭ್ರಷ್ಟಾಚಾರ: ಗೂಳಿಹಟ್ಟಿ ಶೇಖರ್‌ ಆರೋಪ

Published 6 ಜೂನ್ 2024, 13:45 IST
Last Updated 6 ಜೂನ್ 2024, 13:45 IST
ಅಕ್ಷರ ಗಾತ್ರ

ಬಿಜೆಪಿ ಅಧಿಕಾರವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಸಮಾಜ ಕಲ್ಯಾಣ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಲಂಚ ಸಂದಾಯವಾಗಿದೆ ಎಂದು ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಗಂಭೀರ ಆರೋಪ ಮಾಡಿದ್ದಾರೆ. 13 ನಿಮಿಷಗಳ ಆಡಿಯೊ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಗೂಳಿಹಟ್ಟಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ಮಾಡಿದ ಈ ಆರೋಪ ಸಂಚಲನವುಂಟು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT