ಬೆಂಗಳೂರು: ‘ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂಬುದಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ ಅವರ ಮಾತುಗಳೇ ಸಾಕ್ಷಿ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ’ ಎಂದರು.

‘ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ’ ಎಂದರು.

‘ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ. ಕೃಷ್ಣ ಬೈರೇಗೌಡರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.