‘ಕೇಂದ್ರದ ಅನುದಾನ ಪೂರ್ಣ ಬಳಕೆ ಆಗಿಲ್ಲ’
ಕೃಷಿ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ಕೊಟ್ಟ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯ ಬಳಕೆ ಮಾಡಿಕೊಂಡಿಲ್ಲ ಎಂದು ದೂರಿದ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರು ವರ್ಷಕ್ಕೆ ₹10,000 ಪಡೆಯುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆಗೆ ರಾಜ್ಯದ ಪಾಲಿನ ಕೊಡುಗೆ ನಿಲ್ಲಿಸಿದೆ. ಆದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ರಾಜ್ಯದ ರೈತರಿಗೆ ಇದರ ಲಾಭ ದೊರೆಯುತ್ತಿದೆ ಎಂದರು.