ಬೆಂಗಳೂರು: ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರಂಭಿಸಿದ್ದು, ಶುಕ್ರವಾರ ಪ್ರಕರಣದ ಮುಖ್ಯ ಸಾಕ್ಷಿ ವಿಚಾರಣೆ ಮುಕ್ತಾಯಗೊಳಿಸಿತು.

ಈ ಕುರಿತ, ‘ಇನ್ ಕ್ಯಾಮರಾ’ ಪ್ರಕ್ರಿಯೆಯ ಮುಖಾಂತರದ ವಿಚಾರಣೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಶುಕ್ರವಾರ ನಡೆಸಿದರು.

ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಅವರಿಂದ ಮುಖ್ಯ ಸಾಕ್ಷಿಯನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಧೀಶರು ಪಾಟಿ ಸವಾಲಿಗೆ ಅವಕಾಶ ನೀಡಿ ವಿಚಾರಣೆಯನ್ನು ಶನಿವಾರಕ್ಕೆ (ಮೇ 3) ಮುಂದೂಡಿದರು.

ವಜಾ: ‘ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಾಕ್ಷಿ ವಿಚಾರಣೆಗೆ ತಡೆ ನೀಡಬೇಕು ಹಾಗೂ ಆರೋಪಿಯು ತಮ್ಮ ವಕೀಲರ ನೇಮಕ ಮಾಡಿಕೊಳ್ಳಲು ಕನಿಷ್ಠ 7 ದಿನ ಕಾಲಾವಕಾಶ ನೀಡಬೇಕು’ ಎಂದು ಕೋರಿ ಪ್ರಜ್ವಲ್ ಪರ ತಾಯಿ, ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಿಚಾರಣೆ ಮುಂದೂಡಿಕೆ ಮನವಿಯನ್ನು ಪದಾಂಕಿತ ಹಿರಿಯ ವಕೀಲರೂ ಆದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮಕುಮಾರ್ ಬಲವಾಗಿ ಆಕ್ಷೇಪಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ವಿಚಾರಣೆ ಮುಂದೂಡಿಕೆ ಮನವಿಯನ್ನು ಪುರಸ್ಕರಿಸಿ ನಿರ್ದೇಶಿಸಿದ್ದೇ ಆದರೆ ಅದು ವಿಚಾರಣಾ ನ್ಯಾಯಾಲಯದ ಸ್ಥೈರ್ಯ ಕುಂದಿಸಿದಂತಾಗುತ್ತದೆ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಜಾಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.