ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ಹೈಕೋರ್ಟ್, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳು ಬಾಕಿ ಇವೆ. ಎಲ್ಲ ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ಹೇಳಿದ್ದಾರೆ.

ಪ್ರಕರಣಗಳು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಾರಣ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಿಗದಿತ ಕಾಲಮಿತಿಯೊಳಗೆ ಬಡ್ತಿ ಸಿಗದೆ, ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ ಅವಕಾಶ ವಂಚಿತರಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.