ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್‌ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣ
Published 6 ಮೇ 2024, 14:55 IST
Last Updated 6 ಮೇ 2024, 14:55 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್‌ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವಿಡಿಯೊಗಳು ಅಥವಾ ತಿರುಚಿದ ಸುದ್ದಿಗಳ ಪ್ರಸಾರ ಅಥವಾ ಪ್ರಕಟ ಮಾಡದಂತೆ ಕೋರ್ಟ್‌ ತಾತ್ಕಾಲಿಕ ಪ್ರತಿಬಂಧ ವಿಧಿಸಿದೆ.

ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅಸಲು ದಾವೆಯ ವಿಚಾರಣೆಯನ್ನು ರಜಾಕಾಲೀನ ಸಿಸಿಎಚ್‌ ಕೋರ್ಟ್‌ ನ್ಯಾಯಾಧೀಶ ಎಚ್.ಎ.ಮೋಹನ್ ವಿಚಾರಣೆ ನಡೆಸಿದ್ದು; ಪ್ರತಿವಾದಿಗಳಾದ ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಒಟ್ಟು 89 ಮಾಧ್ಯಮ ಸಂಸ್ಥೆಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕ ಆದೇಶ ನೀಡಿದ್ದಾರೆ.

‘ಪ್ರತಿವಾದಿ ಮಾಧ್ಯಮಗಳು ತಮ್ಮ ಬಳಿ ಪ್ರಬಲವಾದ ಸಾಕ್ಷ್ಯ ಹೊಂದಿದ್ದರೆ ಸುದ್ದಿ ಪ್ರಸಾರ ಅಥವಾ ಪ್ರಕಟ ಮಾಡದಂತೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿಲ್ಲ’ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಪ್ರತಿವಾದಿ ಮಾಧ್ಯಮ ಸಂಸ್ಥೆಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಇದೇ 29ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT