ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋವಿಡ್: ರಾಜ್ಯದಲ್ಲಿ 78 ಹೊಸ ಪ್ರಕರಣಗಳು

Published 22 ಡಿಸೆಂಬರ್ 2023, 15:56 IST
Last Updated 22 ಡಿಸೆಂಬರ್ 2023, 15:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 78 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. 

24 ಗಂಟೆಗಳಲ್ಲಿ 2,366 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 3.29ರಷ್ಟಿದೆ. ಬೆಂಗಳೂರಿನಲ್ಲಿ ಒಂದು ದಿನದ ಅವಧಿಯಲ್ಲಿ 1,272 ಪರೀಕ್ಷೆ ನಡೆಸಲಾಗಿದ್ದು, ಹೊಸದಾಗಿ 68 ಪ್ರಕರಣ ದೃಢಪಟ್ಟಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳು 156ಕ್ಕೆ ತಲುಪಿದೆ.  

ಸೋಂಕಿತರಾಗಿದ್ದವರಲ್ಲಿ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿರುವುದು ಖಚಿತಪಟ್ಟಿದೆ. ಸೋಂಕಿತರಲ್ಲಿ 162 ಮಂದಿ ಮನೆ ಆರೈಕೆಗೆ ಒಳಗಾದರೆ, 13 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಂದಿ ತೀವ್ರ ನಿಗಾ ಘಟಕದಲ್ಲಿ, ಉಳಿದ 7 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT