ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಖಚಿತ ಪ್ರಕರಣಗಳ ಪ್ರಮಾಣ ಶೇಕಡಾ 1ಕ್ಕಿಂತ ಇಳಿಕೆಯಾಗಿದ್ದು, ಕೊಂಚ ನೆಮ್ಮದಿಯನ್ನುಂಟು ಮಾಡಿದೆ. ಬುಧವಾರ ಕೋವಿಡ್ ಸೋಂಕಿನಿಂದ ಗುಣಮುಖರಾಗಿ 1,558 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 28,74,839ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದ ಒಟ್ಟು 1,79,016 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 1,365 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21,266ಕ್ಕೆ ತಲುಪಿದೆ. ಈ ನಡುವೆ ಇಂದು 22 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ 32 ಮಂದಿ ಮೃತಪಟ್ಟಿದ್ದರು. ಕೋವಿಡ್ 19 ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.61 ಇದೆ. ಇಂದಿನ ವರೆಗೆ ರಾಜ್ಯದಲ್ಲಿ ಒಟ್ಟು 37,061 ಮಂದಿ ಕೋವಿಡ್ 19 ಸೋಂಕಿನಿಂದಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರು, ದಕ್ಷಿಣ ಕನ್ನಡದಲ್ಲಿ ತಲಾ 3 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 2 ಸಾವು ಪ್ರಕರಣಗಳು ವರದಿಯಾಗಿವೆ. ಬೆಳಗಾವಿ, ಬೆಂಗಳೂರು ಗ್ರಾಮಾಂತರ, ತುಮಕೂರು, ಉಡುಪಿಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ, ಯಾದಗಿರಿ, ಉತ್ತರ ಕನ್ನಡದಲ್ಲಿ ತಲಾ 1 ಸಾವು ಸಂಭವಿಸಿದೆ.

ಇಂದಿನ ಸೋಂಕಿತರ ಪಟ್ಟಿಯಲ್ಲಿ 327 ಪಾಸಿಟಿವ್ ಪ್ರಕರಣಗಳನ್ನು ಹೊಂದಿರುವ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ನಂತರ ದಕ್ಷಿಣ ಕನ್ನಡ(268), ಮೈಸೂರು (123), ಹಾಸನ(107) ನಂತರದ ಸ್ಥಾನಗಳಲ್ಲಿವೆ. ಉಳಿದ ಜಿಲ್ಲೆಗಳಲ್ಲಿ ಪಾಸಿಟಿವ್ ಸಂಖ್ಯೆ 100ರ ಗಡಿ ದಾಟಿಲ್ಲ.

ಇದನ್ನೂ ಓದಿ:ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.