ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಬೆಂಗಳೂರಲ್ಲಿ ಸಾವಿನ ಪ್ರಮಾಣ ಶೂನ್ಯ

Last Updated 23 ಆಗಸ್ಟ್ 2021, 15:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಶುರುವಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮರಣ ಪ್ರಮಾಣ ಶೂನ್ಯಕ್ಕೆ ಇಳಿದಿದೆ. ಇಂದು ಹೊಸದಾಗಿ 270 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,151 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 10 ಜನ ಮೃತಪಟ್ಟಿದ್ದಾರೆ. 1,142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಪಾಸಿಟಿವಿಟಿ ದರ ಶೇ 1.08 ಕ್ಕೆ ತಗ್ಗಿದೆ.

ರಾಜ್ಯದಲ್ಲಿ ಇದುವರೆಗೆ29,39,767 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.28,82,331 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಾರಕ ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ 0.86 ಕ್ಕೆ ನಿಂತಿದೆ. ರಾಜ್ಯದಲ್ಲಿ ಸದ್ಯ20,255 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಇನ್ನು ವಿಶೇಷವೆಂದರೆ, ಕೊರೊನಾ ಎರಡನೇ ಅಲೆ ಶುರುವಾದಾಗಿನಿಂದ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೊರೊನಾದಿಂದ ಯಾರೂ ಮೃತಪಟ್ಟ ಪ್ರಕರಣಗಳು ವರದಿಯಾಗಿಲ್ಲ. ಈ ದಿನ 270 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು15,959 ಜನ ಕೊರೊನಾಕ್ಕೆ ಮೃತಪಟ್ಟಂತಾಗಿದೆ.7,669 ಸಕ್ರಿಯ ಪ್ರಕರಣಗಳಿವೆ.

ಉಳಿದಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಹೊರತುಪಡಿಸಿದಂತೆ ಉಳಿದ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ತಗ್ಗಿರುವುದು ಕಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT