ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 775 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳು ಇಳಿಕೆ

Last Updated 26 ಸೆಪ್ಟೆಂಬರ್ 2021, 19:17 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, 13,213 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಹೊಸದಾಗಿ 775 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಾದವರ ಒಟ್ಟು ಸಂಖ್ಯೆ 29.73 ಲಕ್ಷ ದಾಟಿದೆ.ಒಂದು ದಿನದ ಅವಧಿಯಲ್ಲಿ 1.40 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.54 ರಷ್ಟು ವರದಿಯಾಗಿದೆ.12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ಚಿಕ್ಕಬಳ್ಳಾಪುರ, ಹಾವೇರಿ, ಕಲಬುರ್ಗಿ, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ಹೊಸಪ್ರಕರಣವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 99, ಮೈಸೂರಿನಲ್ಲಿ 81 ಹಾಗೂ ಕೊಡಗಿನಲ್ಲಿ 55 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 255 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.

ಸೋಂಕಿತರಲ್ಲಿ 860 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.22 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ 9 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 7 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 3, ಬೆಳಗಾವಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.ಮರಣ ಪ್ರಮಾಣ ದರವು ಶೇ 1.16 ರಷ್ಟು ವರದಿಯಾಗಿದೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 37,726ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT