ಬೆಂಗಳೂರು: ಕೋವಿಡ್ ಲಾಕ್‌ಡೌನ್‌ನಿಂದ ಮುಚ್ಚಿರುವ ಪ್ರವಾಸೋದ್ಯಮ ತಾಣಗಳನ್ನು ಮುಂದಿನ ವಾರದಿಂದ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಚಿವಸಿ.ಪಿ.ಯೋಗೇಶ್ವರ್ ಹೇಳಿದರು.

ಖನಿಜ ಭವನದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಜೋಗ ಜಲಪಾತದಲ್ಲಿ ₹ 185 ಕೋಟಿ ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲು ಟೆಂಡರ್ ಅಂತಿಮವಾಗಿದ್ದು, ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಿಂದ ಈ ಬೃಹತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕೇರಳ ಹಾಗೂ ಗೋವಾ ರಾಜ್ಯಗಳಿಂದ ಜೋಗ ಜಲಪಾತಕ್ಕೆ 35 ಕಿ.ಮೀ ಉದ್ದದ ಜಲಮಾರ್ಗದಲ್ಲಿ ಪ್ರವಾಸಿಗರು ಬರಲು ವ್ಯವಸ್ಥೆ ಮಾಡಲು ರೂಪಿಸಲಾಗಿದೆ. ಸರ್ಕಾರಿ ರಜಾ ದಿನಗಳಂದು ಲಿಂಗನಮಕ್ಕಿ ಜಲಾಶಯದಿಂದ ಪ್ರಥಮ ಹಂತವಾಗಿ 200 ಕ್ಯೂಸೆಕ್ ನೀರನ್ನು ಹರಿಸಿ ಜೋಗದ ಸೊಬಗನ್ನು ಪ್ರವಾಸಿಗರಿಗೆ ಉಣಿಸಲಾಗುವುದು. ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣವನ್ನು 300 ಕ್ಯೂಸೆಕ್ಸ್‌ಗೆ ಹೆಚ್ಚಿಸಲು ನಿರ್ಧಾರಿಸಲಾಗಿದೆ ಎಂದರು.

ಇದನ್ನೂ ಓದಿ:ಸಿಎಂ ಬದಲಾವಣೆ ಬಗ್ಗೆ ಪರೀಕ್ಷೆ ಬರೆದಿದ್ದೇವೆ, ಶೀಘ್ರದಲ್ಲೇ ಫಲಿತಾಂಶ: ಯೋಗೇಶ್ವರ್

ಪ್ರವಾಸಿಗರ ವಾಸ್ತವ್ಯ ಮಾಡಲು ಎರಡು ಹೋಟೆಲ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ.ರಾಜ್ಯದ ಪತ್ರಿಷ್ಠಿತ ಯೋಜನೆಯಾಗಿರುವ ಹೆಲಿ ಟೂರಿಸಂ ಸರ್ಕೀಟ್‌ಗೆ ಜೋಗ ಜಲಪಾತವನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟಾರೆ ವರ್ಷದ 365 ದಿನಗಳು ಜೋಗದ ಸೊಬಗನ್ನು ರಾಜ್ಯ, ಹೊರ ರಾಜ್ಯಗಳು ಹಾಗೂ ದೇಶ ವಿದೇಶಗಳ ಪ್ರವಾಸಿಗರ ಕಣ್ತುಂಬಿಕೊಳ್ಳಬಹುದು ಎಂದು ಯೋಗೇಶ್ವರ್ ಹೇಳಿದರು.

* ಜೋಗ ಜಲಪಾತಕ್ಕೆ ಕೇರಳ ಹಾಗೂ ಗೋವಾದಿಂದ ಆಗಮಿಸುವ ಪ್ರವಾಸಿಗರಿಗೆ ಸ್ಪೀಡ್ ಬೋಟ್ ಸೌಕರ್ಯ
* ವರ್ಷದ 365 ದಿನವು ಜೋಗ್ ಮೈದುಂಬಿ ಹರಿಯಲು ಲಿಂಗನಮಕ್ಕಿ ಜಲಾಶಯದಿಂದ 200 ಕ್ಯೂಸೆಕ್ಸ್ ನೀರು ಬಿಡುಗಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.