ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳಿಗೆ ಮುಂದಾಗಿದ್ದು,ಮೂರು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡಲು ತೀರ್ಮಾನಿಸಿದೆ.

ಜಿಲ್ಲೆಯಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರದ ಮೂರು ದಿನ ಸಂಪೂರ್ಣ ಲಾಕ್‌ಡೌನ್ ಮಾಡಲಾಗುತ್ತದೆ. ಇದನ್ನು ನೋಡಿಕೊಂಡು ಮುಂದಿನ ದಿನಗಳ ಲಾಕ್‌ಡೌನ್ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದರು.

ಸಂಪೂರ್ಣ ಲಾಕ್‌ಡೌನ್‌ನ ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ತರಕಾರಿ, ದಿನಸಿ ಖರೀದಿಗೂ ಅವಕಾಶ ಇರುವುದಿಲ್ಲ. ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮೋದಿ ಅವರು ಜಿಲ್ಲೆಯ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಸ್ವತಂತ್ರರು ಎಂದರು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಒಪ್ಪಿಗೆ ಸೂಚಿಸಿದರು.

ಹೀಗಾಗಿ ಗುರುವಾರದಿಂದಲೇ ಸಂಪೂರ್ಣ ಲಾಕ್‌ಡೌನ್ ಜಾರಿಗೆ ತರುವ ನಿರ್ಣಯವನ್ನು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತೆಗೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.