ಬಳ್ಳಾರಿ: ಮುಂಬೈ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ವಾಪಸಾದ ಜಿಲ್ಲೆಯ 11 ಮಂದಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ತಿಳಿಸಿದರು.

ಮೂರು ಕುಟುಂಬಗಳ ಸೋಂಕಿತರಲ್ಲಿ ಏಳು ಮಹಿಳೆಯರು, ಮೂವರು ಪುರುಷರು ಮತ್ತು ಒಬ್ಬ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಮಹಿಳೆಯರ ಪೈಕಿ ಒಬ್ಬ ಗರ್ಭಿಣಿ ಮತ್ತು ಒಬ್ಬ ಬಾಣಂತಿ ಇದ್ದಾರೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ಬಳ್ಳಾರಿ ನಗರದ 6, ಬಳ್ಳಾರಿ ತಾಲ್ಲೂಕಿನ ರೂಪನಗುಡಿಯ 3 ಮತ್ತು ಚಾಗನೂರಿನ ಇಬ್ಬರಿಗೆ ಸೋಂಕು ತಗುಲಿದೆ. ಬಾಣಂತಿಯ ಒಂಭತ್ತು ತಿಂಗಳ ಹಸುಗೂಸು ಅಜ್ಜ-ಅಜ್ಜಿ ಬಳಿ ಇದ್ದು, ಅದರ ಗಂಟಲ ದ್ರವದ ಮಾದರಿಯನ್ನು ತಜ್ಞರ ನೆರವಿನೊಂದಿಗೆ ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುವುದು ಎಂದರು.

ಮೇ 6 ರಂದು ಅನಂತಪುರದ ಜಿಲ್ಲಾಧಿಕಾರಿ ನೀಡಿದ ಮಾಹಿತಿ ಅನ್ವಯ 65 ಮಂದಿಯನ್ನು ಗುಂತಕಲ್ ರೈಲು ನಿಲ್ದಾಣ ದಿಂದ ನೇರವಾಗಿ ಕ್ವಾರಂಟೈನ್ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು. ಹೀಗಾಗಿ ಅವರ ಊರುಗಳಲ್ಲಿ ಕಂಟೈನ್ಮೆಂಟ್ ಪ್ರದೇಶಗಳನ್ನು ಘೋಷಿಸುವ ಅಗತ್ಯವಿಲ್ಲ ಎಂದರು.

187 ಮಂದಿಗೆ ಕ್ವಾರಂಟೈನ್: 11 ಸೋಂಕಿತರೊಂದಿಗೆ ಮೊದಲ ಹಂತದ ಸಂಪರ್ಕ ಹೊಂದಿದ್ದ 49 ಮಂದಿ ಸೇರಿದಂತೆ 187 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಿಗಿ ಭದ್ರತೆ: ಕ್ವಾರಂಟೈನ್ ಕೇಂದ್ರಗಳಿಂದ ಕೆಲವರು ಪರಾರಿಯಾಗಿದ್ದ ಪ್ರಕರಣ ನಡೆದಿದ್ದ ಹಿನ್ನೆಲೆಯಲ್ಲಿ ಎಲ್ಲ ಕ್ವಾರಂಟೈನ್ ಕೇಂದ್ರಗಳಿಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.