ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid–19 Karnataka Update| ಬೆಂಗಳೂರಿನ 107 ಸೇರಿ ರಾಜ್ಯದಲ್ಲಿಂದು 322 ಪ್ರಕರಣ

Last Updated 23 ಜೂನ್ 2020, 13:56 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದೂ ಕೂಡ 107 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಇಂದು ಒಟ್ಟಾರೆ 322 ಕೋವಿಡ್‌ ಪ್ರಕರಣಗಳು ದೃಢವಾಗಿವೆ.

ಇಂದಿನ 107 ಪ್ರಕರಣಗಳೊಂದಿಗೆ ಬೆಂಗಳೂರಿನ ಒಟ್ಟಾರೆ ಸೋಂಕಿತರ ಸಂಖ್ಯೆ 1505ಕ್ಕೆ ಏರಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9721 ಆಗಿದ್ದು, ಹತ್ತು ಸಾವಿರದ ಗಡಿ ದಾಟುವ ಎಲ್ಲ ಮುನ್ಸೂಚನೆಗಳೂ ಇವೆ.

ಬೆಂಗಳೂರು ಹೊರತುಪಡಿಸಿದರೆ ಇಂದು ಬಳ್ಳಾರಿಯಲ್ಲಿ ಒಂದೇ ದಿನ 53 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇಂದು ಕೊರೊನಾ ವೈರಸ್‌ನಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 150 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾದವರೇ ಹೆಚ್ಚು

ರಾಜ್ಯದಲ್ಲಿ ಸದ್ಯ ಇಂದಿನ ಮಾಹಿತಿ ಪ್ರಕಾರ 3563 ಸಕ್ರಿಯ ಪ್ರಕರಣಗಳು ಮಾತ್ರವೇ ಇವೆ. 6004 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು 120 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT