ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ರೋಗಿಗಳಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.

ಇದೇ 19 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರು ಪ್ಲಾಸ್ಮಾ ದಾನ ಮಾಡಲಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ರೋಗಿಗಳಿಗೆ ನೀಡಬಹುದಾಗಿದೆ. ಇದರಿಂದ ಅವರ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಈ ಮೊದಲು ರಂಗನಾಥ್ ಅವರು ಕುಣಿಗಲ್ ಕ್ಷೇತ್ರದ ಜನರಿಗೆ ಕೊರೊನಾ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ, ಡಿ ಮತ್ತು ಝಿಂಕ್ ಮಾತ್ರೆಗಳನ್ನು ಉಚಿತವಾಗಿ ಹಂಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.