ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. 1/6#CoronaCurfew
— Siddaramaiah (@siddaramaiah) May 10, 2021
ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ @BJP4Karnataka ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ. 2/6#CoronaCurfew
— Siddaramaiah (@siddaramaiah) May 10, 2021
ನಿತ್ಯ 50,000 ಪಾಸಿಟಿವ್ ಕೇಸ್ ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು @CMofKarnataka ಅವರನ್ನು ಆಗ್ರಹಿಸುತ್ತೇನೆ. 3/6#CoronaCurfew
— Siddaramaiah (@siddaramaiah) May 10, 2021
ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ @BJP4India ಸರ್ಕಾರ ನೀಡುತ್ತಿಲ್ಲ. ಕೇಂದ್ರದ @narendramodi ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. 4/6#CoronaCurfew
— Siddaramaiah (@siddaramaiah) May 10, 2021
ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ @BJP4India ಪಕ್ಷವೇ ನೇರಹೊಣೆ. 5/6#CoronaCurfew
— Siddaramaiah (@siddaramaiah) May 10, 2021
ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು @BJP4Karnataka ಸರ್ಕಾರದ ಜವಾಬ್ದಾರಿ. 6/6#CoronaCurfew
— Siddaramaiah (@siddaramaiah) May 10, 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.