ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Update Karnataka: ಮತ್ತೆ ಸಾವಿರ ದಾಟಿದ ಹೊಸ ಪ್ರಕರಣ

Last Updated 16 ಮಾರ್ಚ್ 2021, 19:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರುಗತಿ ಪಡೆದುಕೊಂಡಿದ್ದು, ಬೆಂಗಳೂರಿನಲ್ಲಿ 710 ಸೇರಿದಂತೆ ರಾಜ್ಯದಲ್ಲಿ 1,135 ಪ್ರಕರಣಗಳು ದೃಢಪಟ್ಟಿವೆ. ಸುಮಾರು ಮೂರು ತಿಂಗಳಿನಿಂದೀಚೆಗೆ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ರಾಜ್ಯದಲ್ಲಿ ಹಿಂದಿನ ವರ್ಷದ ಡಿ.25ಕ್ಕೆ 1,005 ಪ್ರಕರಣಗಳು ವರದಿಯಾಗಿದ್ದವು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. 48 ಗಂಟೆಗಳ ಅವಧಿಯಲ್ಲಿ 2,067 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ತಿಂಗಳು 16 ದಿನಗಳಲ್ಲಿ 11,088 ಮಂದಿ ಕೊರೊನಾ ಸೋಂಕಿತರಾಗಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 693 ಪ್ರಕರಣಗಳು ದೃಢಪಟ್ಟಿವೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಮೂವರು ಹಾಗೂ ಮೈಸೂರು, ಧಾರವಾಡ, ಕಲಬುರ್ಗಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,403ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 531 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.40 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, 9,428 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 129 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಒಂದು ದಿನದ ಅವಧಿಯಲ್ಲಿ 68 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 1.99 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

ಚಾಮರಾಜನಗರ ಹಾಗೂ ಹಾವೇರಿ ಬಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ನಾಲ್ಕು ದಿನಗಳಲ್ಲಿ 2,023 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈವರೆಗೆ ಸೋಂಕಿತರ ಸಂಖ್ಯೆ 4.12 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 58 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 54,549ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 50, ಕಲಬುರ್ಗಿಯಲ್ಲಿ 46, ಬೆಂಗಳೂರು ಗ್ರಾಮಾಂತರದಲ್ಲಿ 38, ಬೀದರ್, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 32 ಪ್ರಕರಣಗಳು ಹೊಸದಾಗಿ ವರದಿ‌ಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT