ಶಿರಸಿ: ಲಾಕ್ಡೌನ್ ಸಡಿಲಿಕೆಯ ನಂತರ ಬಾಗಿಲು ತೆರೆದಿದ್ದ ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಭಾನುವಾರದಿಂದ ಒಂದು ವಾರ ದೇವಿಯ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.
ದೇವಾಲಯದ ಪಕ್ಕದಲ್ಲಿರುವ ಮನೆಯ ವ್ಯಕ್ತಿಯಲ್ಲಿ ಕೋವಿಡ್ 19 ದೃಢಪಟ್ಟಿರುವ ಕಾರಣ, ಮುನ್ನೆಚ್ಚರಿಕೆಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ದೇವಾಲಯದ ಸಿಬ್ಬಂದಿಗೆ ರಜೆ ನೀಡಲಾಗಿದೆ. ದೇವಿಗೆ ನಿತ್ಯದ ಪೂಜೆ ನಡೆಯುತ್ತದೆ. ಆದರೆ, ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ತಿಳಿಸಿದ್ದಾರೆ.