ಕಲಬುರ್ಗಿ: ಇಲ್ಲಿಯ ಕೆಎಸ್ಆರ್ಪಿ ಕಮಾಂಡೆಂಟ್ ಅವರ ನಿವಾಸದಲ್ಲಿ ಭದ್ರತಾ ಕೆಲಸ ನಿರ್ವಹಿಸುತ್ತಿದ್ದ 52 ವರ್ಷ ವಯಸ್ಸಿನ ಕೆಎಸ್ಆರ್ಪಿ ಕಾನ್ಸ್ಟೆಬಲ್ಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.
ಕೆಎಸ್ಆರ್ಪಿ ಕಮಾಂಡೆಂಟ್ ಅವರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದು, ಈ ಕಾನ್ಸ್ಟೆಬಲ್ ಅವರೊಂದಿಗೆ ಒಡನಾಟ ಹೊಂದಿದ್ದಅಡುಗೆಯವರನ್ನೂ ಕ್ವಾರಂಟೈನ್ ಮಾಡಲಾಗಿದೆ.
ಇಲ್ಲಿಯ ಗಾಜಿಪುರದ ಪುಟಾಣಿ ಗಲ್ಲಿಯ 78 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಅವರ ಮನೆಯ ಪಕ್ಕದಲ್ಲಿಯೇ ಈ ಕಾನ್ಸ್ಟೆಬಲ್ ವಾಸವಾಗಿದ್ದರು. ಇವರಿಬ್ಬರೂ ಒಂದೇ ಶೌಚಾಲಯ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.