ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಮೃತಪಟ್ಟವರಲ್ಲಿ ಇಬ್ಬರು ಕೋವಿಡ್ ಪೀಡಿತರಾಗಿದ್ದರು ಎನ್ನುವುದು ಪ್ರಯೋಗಾಲಯ ಪರೀಕ್ಷೆಯಿಂದ ದೃಢಪಟ್ಟಿದೆ. ಇದರಿಂದಾಗಿ ಈ ವರ್ಷ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.

ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದ ಬೆಳಗಾವಿಯ 78 ವರ್ಷದ ವ್ಯಕ್ತಿ ಏಪ್ರಿಲ್ 6ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದ 46 ವರ್ಷದ ವ್ಯಕ್ತಿ ಮೇ 29ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆಗೆ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇಬ್ಬರೂ ಇದೇ 5ರಂದು ಮೃತಪಟ್ಟಿದ್ದಾರೆ. ಅವರ ಕೋವಿಡ್ ಪರೀಕ್ಷಾ ವರದಿ ಶನಿವಾರ ಬಂದಿದ್ದು, ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 542 ಗಂಟಲ ದ್ರವದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, 57 ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಇದರಿಂದಾಗಿ ಈವರೆಗೆ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 894ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 366ಕ್ಕೆ ತಲುಪಿದೆ. 353 ಮಂದಿ ಮನೆ ಆರೈಕೆಗೆ ಒಳಗಾದರೆ, 13 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.