ರಾಜ್ಯದಲ್ಲಿ ಹೊಸದಾಗಿ 1,247 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.90 ಲಕ್ಷಕ್ಕೆ ಮುಟ್ಟಿದೆ. ಈ ತಿಂಗಳು ನಾಲ್ಕು ದಿನಗಳ ಅವಧಿಯಲ್ಲಿ 5,463 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,365 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ ಮತ್ತೆ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,834ಕ್ಕೆ ತಲುಪಿದೆ.