ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ನಿರ್ವಹಣೆ ಕಾರ್ಯ ಸಮರ್ಥವಾಗಿ ಮಾಡುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸೋಂಕು ವೇಗವಾಗಿ ಹಬ್ಬುತ್ತಿದೆ. ಬೇಡಿಕೆ ಪೂರೈಸಲು ಮುಖ್ಯಮಂತ್ರಿ ನಾಯಕತ್ವದಲ್ಲಿ ಬಹಳಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿ ಕಾರ್ಯಕರ್ತರು ಕೋವಿಡ್ ನಿಯಂತ್ರಣ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ರಾಜ್ಯದಲ್ಲಿ 70 ಸಾವಿರ ಹಾಸಿಗೆಗಳನ್ನು ಮೀಸಲಿರಿಸಿದ್ದೇವೆ. ಸರ್ಕಾರದಿಂದ 35 ಸಾವಿರ ಹಾಸಿಗೆ ನೀಡಲಾಗುತ್ತಿದೆ. ಆಮ್ಲಜನಕ ಸೌಲಭ್ಯದ 50 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿವೆ. 970 ಟನ್ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಕ್ಕೆ 1,200 ಟನ್ ಹಂಚಿಕೆ ಮಾಡಲು ಕೋರ್ಟ್ ನಿರ್ದೇಶನ ನೀಡಿದೆ. ಇನ್ನೂ 10 ಸಾವಿರ ಹಾಸಿಗೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.

‘ತಾಲ್ಲೂಕುಮಟ್ಟದಲ್ಲೂ ಕೇಂದ್ರವನ್ನೂ ನಿರ್ಮಿಸುತ್ತಿದ್ದೇವೆ. ಅಲ್ಲೂ ಆಮ್ಲಜನಕ ಸೌಲಭ್ಯದ ಹಾಸಿಗೆ ಪೂರೈಕೆ ಮಾಡುತ್ತೇವೆ. ರೆಮ್ಡಿಸಿವಿರ್ಗೆ ಸಾಕಷ್ಟು ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಸರ್ಕಾರವೂ ನೆರವು ನೀಡುತ್ತಿದೆ’ ಎಂಡಿದರು.

'ಸುಮಾರು 1.50 ಲಕ್ಷ ಆರ್ಟಿಪಿಸಿಆರ್ ತಪಾಸಣೆ ಸರ್ಕಾರದಿಂದ ನಡೆಯುತ್ತಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ‍್ಯಾಪಿಡ್ ಆಂಟಿಜೆನ್ ಟೆಸ್ಟ್ಗಳನ್ನು ಮಾಡುತ್ತಿದ್ದೇವೆ. 24 ಗಂಟೆ ಒಳಗೆ ಈ ಆರ್ಪಿಸಿಆರ್ ವರದಿ ಕೊಡಬೇಕು. ಕೋವಿಡ್ ಲಕ್ಷಣ ಹೆಚ್ಚಳಗೊಂಡು ಜೀವಕ್ಕೆ ಅಪಾಯ ಆಗುತ್ತಿದೆ. ಈ ಎಲ್ಲ ಸಮಸ್ಯೆ ನಿವಾರಣೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಕಡೆ ಔಷಧ, ಮಾತ್ರೆಗಳನ್ನು ಸಂಪೂರ್ಣವಾಗಿ ಒದಗಿಸುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಎರಡು ದಿನಗಳಲ್ಲಿ ಅದನ್ನು ದೊಡ್ಡ ಮಟ್ಟದಲ್ಲಿ ಮಾಡುತ್ತೇವೆ’ ಎಂದರು.

ಸ್ವಪಕ್ಷೀಯರಿಗೆ ಉತ್ತರಿಸುತ್ತೇವೆ: ‘ಜಿಂದಾಲ್ಗೆ ಭೂಮಿ ಪರಭಾರೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಭೂಮಿ ಪರಭಾರೆ ಮಾಡಿದ್ದೇವೆ. ಹಿಂದಿನ ಸರ್ಕಾರ ಈ ಬಗ್ಗೆ ಸರಿಯಾಗಿ ಮತ್ತು ಸ್ಪಷ್ಟವಾಗಿ ಮಾಹಿತಿ ನೀಡಿರಲಿಲ್ಲ. ಈಗ ಸರಿಯಾದ ಕ್ರಮದಲ್ಲಿ ಮಾಡಿದ್ದೇವೆ’’ ಎಂದು ಸಮರ್ಥಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.