ಶೀತ, ಜ್ವರ: ಶಾಲೆಗೆ ಬೇಡ ಮಕ್ಕಳು
ಮಕ್ಕಳಿಗೆ ಶೀತ, ಜ್ವರ, ಕೆಮ್ಮು ಮೊದಲಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸಬಾರದು ಎಂದು ಸಂದೇಶ ನೀಡಬೇಕು. ಮಕ್ಕಳು, ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.
ಶಾಲಾ ಕಾಲೇಜು ಮಂಡಳಿಗಳು ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಸಮಸ್ಯೆ ಕಂಡುಬಂದ ತಕ್ಷಣ ಪೋಷಕರಿಗೆ ಮಾಹಿತಿ ನೀಡಬೇಕು ಎಂದರು.
ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.