ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌, ಥಾಯ್ಲೆಂಡ್‌ ಪ್ರಯಾಣಿಕರ ಮೇಲೆ ನಿಗಾ

Last Updated 1 ಮೇ 2022, 3:07 IST
ಅಕ್ಷರ ಗಾತ್ರ

ಬೆಂಗಳೂರು: ಜಪಾನ್‌ ಮತ್ತು ಥಾಯ್ಲೆಂಡ್‌ ದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ದೂರವಾಣಿ ಮೂಲಕ ನಿಗಾ (ಟೆಲಿ ಮಾನಿಟರಿಂಗ್‌) ಇರಿಸುವಂತೆ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಶನಿವಾರ ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಸುತ್ತೋಲೆ ಹೊರಡಿಸಿರುವ ಅವರು, ‘ಈ ಎರಡೂ ರಾಷ್ಟ್ರಗಳಿಂದ ಬಂದ ಪ್ರಯಾಣಿಕರಲ್ಲಿ ನಿಗಾ ಅವಧಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾ ಮಟ್ಟದ ತಂಡವು ಆರ್‌ಟಿ–ಪಿಸಿಆರ್‌ ವಿಧಾನದಲ್ಲಿ ಕೋವಿಡ್‌ ಪರೀಕ್ಷೆ ನಡೆಸಬೇಕು ಮತ್ತು ಚಿಕಿತ್ಸೆ ನೀಡಬೇಕು. ಕೋವಿಡ್‌ ದೃಢಪಟ್ಟವರ ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನೆಯ ವಿಶ್ಲೇಷಣೆಗೆ ಕಳುಹಿಸಬೇಕು’ ಎಂದು ಸೂಚಿಸಲಾಗಿದೆ.

ದಕ್ಷಿಣ ಕೊರಿಯಾ, ಜಪಾನ್‌, ಥಾಯ್ಲೆಂಡ್‌, ವಿಯೆಟ್ನಾಂ, ನ್ಯೂಜಿಲೆಂಡ್‌, ರಷ್ಯಾ ಮತ್ತು ಚೀನಾದಿಂದ ಬೆಂಗಳೂರು ಹಾಗೂ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವವರಲ್ಲಿ ಶೇಕಡ 2ರಷ್ಟು ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸುವಂತೆಯೂ ಸೂಚನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT