ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಲ್‌ಐ, ಸಾರಿ | ಕೋವಿಡ್‌ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್‌ ಗುಂಡೂರಾವ್‌

Published 5 ಜನವರಿ 2024, 15:51 IST
Last Updated 5 ಜನವರಿ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ವಿಷಮಶೀತ ಜ್ವರ (ಐಎಲ್‌ಐ ಮತ್ತು ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಕಾಣಿಸಿಕೊಳ್ಳುವ ಎಲ್ಲ ರೋಗಿಗಳಿಗೂ ಕೋವಿಡ್‌ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಈವರೆಗೆ ಐಎಲ್‌ಐ ಮತ್ತು ಸಾರಿ ರೋಗಿಗಳಲ್ಲಿ ಪ್ರತಿ 20 ಪ್ರಕರಣಗಳಲ್ಲಿ ಒಬ್ಬರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿತ್ತು. ಇನ್ನು ಮುಂದೆ ಎಲ್ಲರಿಗೂ ಪರೀಕ್ಷೆ ನಡೆಸುವಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ’ ಎಂದರು.

ಪ್ರತಿ ದಿನ 7,000 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಈಗ ಕೋವಿಡ್‌ ದೃಢಪ್ರಮಾಣ ದರ ಶೇಕಡ 3.82ರಷ್ಟಿದೆ. ನೆರೆಯ ಕೇರಳದಲ್ಲಿ ಕೋವಿಡ್‌ ದೃಢಪ್ರಮಾಣ ದರ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಇಳಿಮುಖವಾಗಿಲ್ಲ. ಆದ್ದರಿಂದ ಕೋವಿಡ್‌ ದೃಢಪಟ್ಟವರ ಮೇಲೆ ತೀವ್ರ ನಿಗಾ ಇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT