ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪರೀಕ್ಷೆಯಲ್ಲಿ ಭಾರಿ ಇಳಿಕೆ: ಸೋಂಕು ಪ್ರಕರಣಗಳಲ್ಲೂ ಕುಸಿತ

Last Updated 27 ಡಿಸೆಂಬರ್ 2021, 18:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಇಳಿಮುಖ ಮಾಡಿರುವುದರಿಂದ ಸೋಂಕಿತರ ಪ್ರಮಾಣ ತುಸು ತಗ್ಗಿದೆ. ಸೋಮವಾರ 58,495 ಪರೀಕ್ಷೆಗಳನ್ನು ನಡೆಸಲಾಗಿದ್ದು, 289 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.ಸದ್ಯ 7,449 ಮಂದಿಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

18 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ. ಸೋಂಕು ದೃಢ ಪ್ರಮಾಣ ಶೇ 0.49 ರಷ್ಟಿದೆ.ಬೆಂಗಳೂರು ನಗರದಲ್ಲಿ 172 ಮಂದಿಕೋವಿಡ್ಪೀಡಿತರಾಗಿದ್ದಾರೆ.ಕೊಡಗು 37, ತುಮಕೂರು 15, ದಕ್ಷಿಣ ಕನ್ನಡ 12, ಕೋಲಾರದಲ್ಲಿ 10 ಪ್ರಕರಣಗಳು ವರದಿಯಾಗಿವೆ.

ಉಳಿದ ಜಿಲ್ಲೆಗಳ ಪೈಕಿಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿಹೊಸ ಪ್ರಕರಣಗಳು ವರದಿಯಾಗಿಲ್ಲ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.04 ಲಕ್ಷ ದಾಟಿದೆ.

ಸೋಂಕಿತರಲ್ಲಿ 254 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಬೆಂಗಳೂರಿನಲ್ಲಿ 6,063 ಸೋಂಕಿತರಿದ್ದಾರೆ. ರಾಮನಗರ, ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 1.38 ರಷ್ಟು ಇದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,316ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT