ಬೆಂಗಳೂರು: ‘ಕೇಂದ್ರ ಸರ್ಕಾರ ಕಳುಹಿಸಿರುವ 4 ಲಕ್ಷ ಡೋಸ್ ಕೋವಿಡ್ ಲಸಿಕೆಯು ಬುಧವಾರ ತಡರಾತ್ರಿ ರಾಜ್ಯವನ್ನು ತಲುಪಿದೆ. ವಾರದೊಳಗೆ ಇನ್ನೂ 12 ಲಕ್ಷ ಲಸಿಕೆ ಇಲ್ಲಿಗೆ ಬರಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಲಸಿಕೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಲಸಿಕೆ ನಮಗೆ ಆಶಾಕಿರಣವಾಗಿತ್ತು. ಈಗ ಅದು ವಾಸ್ತವವಾಗಿದೆ. ಕೇವಲ ಒಂದು ವರ್ಷದಲ್ಲಿ ಲಸಿಕೆಯನ್ನು ಕಂಡುಹಿಡಿಯಲಾಗಿದೆ. ಎಲ್ಲ ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಗುರುವಾರ 1,982 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, ಮಧ್ಯಾಹ್ನ 3 ಗಂಟೆ ವೇಳೆಗೆ 35,531 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಲಸಿಕೆ ಪಡೆದವರಲ್ಲಿ 23,106 ಮಂದಿ ಹಿರಿಯ ನಾಗರಿಕರಾಗಿದ್ದಾರೆ. ಈವರೆಗೆ 30.44 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 5.39 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 3.29 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಲ್ಲಿ 14.74 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸುತ್ತಿರುವವರಲ್ಲಿ 4.18 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.