ಹೊನ್ನಾವರ (ಉತ್ತರ ಕನ್ನಡ): ‘ಲಾಕ್‌ಡೌನ್ ಕಾರಣ ನಷ್ಟ ಅನುಭವಿಸಿರುವ ಸವಿತಾ ಸಮಾಜದ ವೃತ್ತಿ ನಿರತರು, ಮಡಿವಾಳ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಅಗಸ್ಟ್ 15ರವರೆಗೆ ವಿಸ್ತರಿಸಲಾಗಿದೆ’ ಎಂದು ಕಾರ್ಮಿಕ ಹಾಗೂ ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.

ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,‘ಪರಿಹಾರ ಕೋರಿ 1.51 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಅಧಿಕೃತ ಮಾಹಿತಿ ಸರ್ಕಾರದ ಬಳಿ ಇಲ್ಲದಿರುವುದು ಪರಿಹಾರ ನೀಡಲು ತೊಡಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳೀಕರಣ ಮಾಡಲಾಗಿದ್ದು, ಅರ್ಜಿಯ ಜತೆ ಆಧಾರ್ ಹಾಗೂ ಬ್ಯಾಂಕ್ ಖಾತೆ ವಿವರ ನೀಡಿದರೆ ಸಾಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.