ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಮಾಂಸ ಮಾರಾಟ: ಅರೋಪಿಗೆ ನಿರೀಕ್ಷಣಾ ಜಾಮೀನು

Published : 25 ಮೇ 2023, 16:27 IST
Last Updated : 25 ಮೇ 2023, 16:27 IST
ಫಾಲೋ ಮಾಡಿ
Comments

ಬೆಂಗಳೂರು: ಕುರಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಅಂಗವಿಕಲ ವ್ಯಕ್ತಿಯೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಂಧನದ ಭೀತಿ ಎದುರಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ವರದಾಪುರದ ಹೈದರ್‌ ಅಲಿ ಅಲಿಯಾಸ್ ತಾಜು (30) ಎಂಬುವವರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

‘ಅರ್ಜಿದಾರರು ₹ 1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಸಾಕ್ಷ್ಯಗಳನ್ನು ತಿರುಚಲು ಯತ್ನಿಸಬಾರದು. ಇದೇ ಮಾದರಿಯ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು‘ ಎಂಬ ಷರತ್ತು ವಿಧಿಸಿದೆ.

ಹೊಸಕೋಟೆಯಲ್ಲಿ ಕುರಿ ಮಾಂಸ ಮಾರಾಟದ ಅಂಗಡಿ ನಡೆಸುತ್ತಿರುವ ಹೈದರ್ ಅಲಿ ವಿರುದ್ಧ, ‘ಕುರಿ ಮಾಂಸದ ವ್ಯಾಪಾರ ನಡೆಸುತ್ತಿದ್ದ ಅಂಗಡಿಯಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದಾರೆ‘ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂಲಿಬೆಲೆ ಠಾಣಾ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT