ಬೆಂಗಳೂರು: ‘ಅತೀವ ಮಳೆಯಿಂದ ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ಹಲವೆಡೆ ಬೆಳೆ ನಾಶವಾಗಿದೆ. ಸರ್ಕಾರವು ಹೆಕ್ಟೇರ್ಗೆ ₹25,000–₹30,000 ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರಕ್ಕೆ ರೈತರು ಮತ್ತು ಜನರ ಬಗ್ಗೆ ಕಾಳಜಿಯೇ ಇಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ತಾವು ಓಡಾಡಲು ₹80 ಕೋಟಿಯ ಹೆಲಿಕಾಪ್ಟರ್ ಹಾಗೂ ₹150 ಕೋಟಿ ವೆಚ್ಚದಲ್ಲಿ ವಿಮಾನ ಖರೀದಿಸಲು ಮುಂದಾಗಿದ್ದಾರೆ. ಆದರೆ, ಅವರಿಗೆ ಮಳೆ ಸಂತ್ರಸ್ತರ ಬಗ್ಗೆ ಮಾತನಾಡಲು ಸಮಯವಿಲ್ಲ’ ಎಂದರು.

‘ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನೆರೆ ಪೀಡಿತ ಪ್ರದೇಶಗಳಿಗೆ ಇದೇ 9 ರಿಂದ ಪ್ರವಾಸ ಕೈಗೊಳ್ಳಲಿದ್ದೇವೆ. ನಷ್ಟಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸರ್ಕಾರವು ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕೃಷಿ ಸಚಿವರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ₹250 ಬೆಲೆಯ ಗೊಬ್ಬರವನ್ನು ₹1,000 ಕೊಟ್ಟು ರೈತರು ಖರೀದಿಸಿದ್ದಾರೆ. ಆದರೆ ಈ ಬಗ್ಗೆ ತಮಗೆ ಮಾಹಿತಿಯೇ ಇಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಅವರು ರೈತರ ಪರವಾಗಿ ಹೇಗೆ ಕೆಲಸ ಮಾಡಬಹುದು ಎಂಬುದು ಈ ಮಾತಿನಿಂದ ಗೊತ್ತಾಗುತ್ತದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

‘ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕ ಪಕ್ಷಗಳು. ಅವರ ಹೋರಾಟ ಅವರದ್ದು, ನಮ್ಮ ಹೋರಾಟ ನಮ್ಮದು. ಧರ್ಮಸ್ಥಳದ ವಿಚಾರದಲ್ಲಿ ಪ್ರತ್ಯೇಕ ಹೋರಾಟ ನಡೆಸಿದರೂ, ನಾವು ಒಟ್ಟಿಗೇ ಇದ್ದೇವೆ. ಧರ್ಮಸ್ಥಳ ಪರವಾದ ಹೋರಾಟದಲ್ಲಿ ಎರಡೂ ಮಿತ್ರಪಕ್ಷಗಳು ಪರಸ್ಪರರನ್ನು ಬಿಟ್ಟುಕೊಟ್ಟಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.