ಬೆಂಗಳೂರು: ‘ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಬಳಸಿಕೊಂಡು ಸರ್ಕಾರಿ ಶಾಲೆಗಳ ಸ್ಥಾಪನೆ, ಅಭಿವೃದ್ಧಿ ಮಾಡುವ ಕುರಿತು ಮುಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳ ಸ್ಥಾಪನೆ, ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿಕೊಡುವ ಕಂಪನಿಗಳ ಹೆಸರನ್ನೇ ಶಾಲೆಗೆ ಇಡಲು ಅನುಮತಿ ನೀಡಲಾಗುವುದು. ನಗರದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿಬಿಎಸ್ಇ ಮಾದರಿ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುವುದು’ ಎಂದರು.

‘ಈಗಾಗಲೇ ಒಂದಷ್ಟು ಶಾಲೆಗಳು ಪ್ರಾರಂಭವಾಗಿವೆ. ಮುಂದಿನ ಶೈಕ್ಷಣಿಕ ವರ್ಷದ ಒಳಗೆ 2,000 ಶಾಲೆಗಳ ನಿರ್ಮಾಣದ ಗುರಿ ಇಟ್ಟುಕೊಂಡಿದ್ದೇವೆ. ರಾಜ್ಯದಲ್ಲಿ ₹7,800 ಕೋಟಿಯಷ್ಟು ಹಣವನ್ನು ಸಿಎಎಸ್ಆರ್ ಹಣ ಲಭ್ಯವಿದೆ. ನನ್ನ ಕ್ಷೇತ್ರದಲ್ಲಿ ಟೊಯೊಟಾ ಕಂಪನಿ ತಲಾ ₹10 ಕೋಟಿ ವೆಚ್ಚದಲ್ಲಿ ಏಳು ಕೆಪಿಎಸ್ ಶಾಲೆ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಅದೇ ರೀತಿ ಇತರೆ ಉದ್ಯಮಿಗಳನ್ನೂ ಉತ್ತೇಜಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಮೂರು ಪಂಚಾಯತಿಗಳಿಗೆ ಒಂದು ಕೆಪಿಎಸ್ ಶಾಲೆ ಆರಂಭಿಸಲಾಗುವುದು. ಮಕ್ಕಳು ಸರ್ಕಾರಿ ಶಾಲೆಗಳನ್ನು ತೊರೆಯದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.