ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಗ್ಯ ಕ್ಷೇತ್ರಕ್ಕೆ ಸಿಎಸ್‌ಆರ್‌ ನಿಧಿ: ದಿನೇಶ್‌ ಗುಂಡೂರಾವ್

Published : 9 ಆಗಸ್ಟ್ 2024, 15:43 IST
Last Updated : 9 ಆಗಸ್ಟ್ 2024, 15:43 IST
ಫಾಲೋ ಮಾಡಿ
Comments

ಬೆಂಗಳೂರು: ಕಾರ್ಪೋರೇಟ್‌ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್‌ಆರ್) ಆರೋಗ್ಯ ಕ್ಷೇತ್ರಕ್ಕೆ ವಿನಿಯೋಗಿಸಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಸಿ-ಕ್ಯಾಂಪ್‌ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಪೋರೇಟ್‌ ಕಂಪನಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜನಸಾಮಾನ್ಯರ ಆರೋಗ್ಯ ಸುರಕ್ಷತೆಗಾಗಿ ಇಲಾಖೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಹಲವು ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಜನರ ಆರೋಗ್ಯ ರಕ್ಷಣೆಯತ್ತ ಗಮನ ಹರಿಸುತ್ತಿದ್ದೇವೆ. ಗ್ರಾಮೀಣ ಪ್ರದೇಶದ ಮನೆಗಳಿಗೆ ತೆರಳಿ ಜನರ ತಪಾಸಣೆ ನಡೆಸಿ, ಔಷಧಗಳನ್ನೂ ತಲುಪಿಸುತ್ತಿದ್ದೇವೆ. ಇಂತಹ ದೊಡ್ಡ ಯೋಜನೆಗಳಿಗೆ ಕೈಜೋಡಿಸಬೇಕು. ಸಿಎಸ್‌ಆರ್ ನಿಧಿಯ ಹೆಚ್ಚಿನ ಭಾಗ ನೀಡಿದರೆ ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರಬಹುದು’ ಎಂದು ಸಲಹೆ ನೀಡಿದರು.

‘ಗೃಹ ಆರೋಗ್ಯ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಬಳಕೆಯ ಅಗತ್ಯವಿದೆ. ಮಂಗನ ಕಾಯಿಲೆಯಂತಹ ರೋಗಗಳಿಗೆ ಔಷಧ ಕಂಡುಹಿಡಿಯಲು ಸಂಶೋಧನೆಗೆ ಒತ್ತು ನೀಡಿದ್ದೇವೆ. ಇಂತಹ ಕಾರ್ಯಗಳಿಗೆ ಸಿಎಸ್‌ಆರ್ ನಿಧಿ ಬಳಸಿಕೊಳ್ಳುತ್ತೇವೆ. ಮೊದಲ ಸಭೆಯಲ್ಲಿ ₹21 ಕೋಟಿ ದೊರಕಿತ್ತು’ ಎಂದರು.

ಇನ್ಫೊಸಿಸ್ ಫೌಂಡೇಷನ್, ಯುಸೈಡ್, ಜಿ.ಇ. ಹೆಲ್ತ್‌ಕೇರ್, ಬಾಷ್‌ ಗ್ಲೋಬಲ್‌ ಸಾಫ್ಟ್‌ವೇರ್‌ ಟೆಕ್ನಾಲಜೀಸ್‌, ಬಯೋಕಾನ್‌ ಫೌಂಡೇಷನ್‌ ಸೇರಿದಂತೆ ಹಲವು ಕಂಪನಿಗಳ ಪ್ರಮುಖರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT