ಬೆಂಗಳೂರು: ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್ಆರ್) ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.

ಸಿಎಸ್ಆರ್ ನಿಧಿ ಬಳಕೆ ಕುರಿತು ರಾಜ್ಯ ಸರ್ಕಾರ ಕರಡು ನೀತಿ ರೂಪಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಸೇರಿದಂತೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ, ಹೊಸ ಸರ್ಕಾರಿ ಶಾಲೆಗಳ ಸ್ಥಾಪನೆ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಸಿಎಸ್ಆರ್ ನಿಧಿಯನ್ನು ಶಾಲಾ ಶಿಕ್ಷಣದ ಅಭಿವೃದ್ಧಿಗೆ ಬಳಸಿಕೊಳ್ಳುವುದು, ಪ್ರತಿ ಪಂಚಾಯಿತಿ ಮಟ್ಟದಲ್ಲಿ ಕನಿಷ್ಠ ಒಂದು ಕೆಪಿಎಸ್ ಶಾಲೆ ಆರಂಭಿಸುವುದು ನೀತಿಯ ಪ್ರಮುಖ ಉದ್ದೇಶವಾಗಿದೆ.

ರಾಜ್ಯದಲ್ಲಿನ ವಿವಿಧ ಕಾರ್ಪೋರೇಟ್ ಕಂಪನಿಗಳಿಂದ ವಾರ್ಷಿಕವಾಗಿ ₹8,500 ಕೋಟಿ ಸಿಎಸ್ಆರ್ ನಿಧಿಯಡಿ ಲಭ್ಯವಿದೆ. ಆದರೆ, ಬಹುತೇಕ ಕಂಪನಿಗಳು ಈ ಮೊತ್ತವನ್ನು ಬೇರೆ ರಾಜ್ಯಗಳಿಗೂ ಖರ್ಚು ಮಾಡುತ್ತಿವೆ. ರಾಜ್ಯದಲ್ಲೇ ಬಳಕೆ ಮಾಡುವ ಕುರಿತು ಇದುವರೆಗೂ ಯಾವುದೇ ನೀತಿ ಅಸ್ತಿತ್ವದಲ್ಲಿಲ್ಲ. ಹೊಸ ನೀತಿ ಅಂಗೀಕಾರವಾದರೆ ಸಿಎಸ್ಆರ್ ನಿಧಿಯನ್ನು ಕಂಪನಿಗಳು ಕಡ್ಡಾಯವಾಗಿ ಕರ್ನಾಟಕಕ್ಕೇ ಖರ್ಚು ಮಾಡಬೇಕಾಗುತ್ತದೆ.

ಸಿಎಸ್ಆರ್ ನಿಧಿ ರಾಜ್ಯದಲ್ಲಿನ ಶಿಕ್ಷಣ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಲಭ್ಯವಾಗದ ಕಾರಣ ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಶಾಲಾ ಶಿಕ್ಷಣ ಇಲಾಖೆ ಏಷ್ಯನ್ ಡೆವೆಲಪ್ಮೆಂಟ್ ಬ್ಯಾಂಕ್ (ಎಡಿಬಿ)ನಿಂದ ಸಾಲ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.