ಬೆಳಗಾವಿ (ಸುವರ್ಣ ಸೌಧ): ಸಿ.ಟಿ. ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ನೀಡಿದ ದೂರಿನ ಕುರಿತು ಸದನದಲ್ಲಿ ರೂಲಿಂಗ್ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ರವಿ ಅವರು ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಮಾಡಿರುವ ಆರೋಪಕ್ಕೆ ಸದಸ್ಯರಾದ ಉಮಾಶ್ರೀ, ಬಲ್ಕೀಸ್ ಬಾನು, ನಾಗರಾಜ್ ಯಾದವ್ ಸಾಕ್ಷ್ಯ ನುಡಿದಿದ್ದಾರೆ. ಪೀಠ ಇಂತಹ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದರು.
.CT ರವಿ ಅವಾಚ್ಯ ಪದ ಬಳಕೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ದೂರು ನೀಡಿದ್ದಾರೆ– ಸಿಎಂ.
ಪ್ರತಿಯೊಬ್ಬರೂ ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗಿನ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಅಸಾಂವಿಧಾನಿಕ ಪದಗಳ ಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲು ಅವಕಾಶ ನೀಡಬಾರದು ಎಂದರು.

ಸಿ.ಟಿ. ರವಿ ವಿರುದ್ಧ ಹಲ್ಲೆಗೆ ಯತ್ನ ನಡೆಸಿದ ಪ್ರಕರಣ ಕುರಿತು ಬಿಜೆಪಿ–ಜೆಡಿಎಸ್ ಸದಸ್ಯರು ನೀಡಿದ ದೂರುಗಳ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂದರು.

ಸಿ.ಟಿ. ರವಿ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದ ಲಕ್ಷ್ಮೀ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ಮತ್ತೆ ಆಕ್ರೋಶ ಹೊರಹಾಕಿದರು.
.CT Ravi Arrest | ಮಾನಹಾನಿ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.