ಬೆಂಗಳೂರು: ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾ ಯಿತಿ ಅಧ್ಯಕ್ಷರನ್ನು ಹೊರಗಿಡಲು ಸರ್ಕಾರ ನಿರ್ಧರಿಸಿದ್ದು, ವ್ಯವಹಾರದ ಎಲ್ಲ ಚೆಕ್‌ಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ (ಎಸ್‌ಡಿಎಎ) ನೀಡಲಾಗಿದೆ.

ಈ ಸಂಬಂಧ ರೂಪಿಸಲಾದ ನಡಾವಳಿಗಳನ್ನು ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡಾವಳಿಗಳನ್ನು ರೂಪಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಗ್ರಾಮ ಪಂಚಾಯಿತಿ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಕ್ಕೆ 2006ರಲ್ಲಿ ತಂದಿದ್ದ ತಿದ್ದುಪಡಿಯಂತೆ ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಸೂಚಿಸುವ ಅಧಿಕಾರಿಗಳು ಅಥವಾ ಪ್ರಾಧಿಕಾರ ನಿರ್ವಹಿಸಬಹುದು. ಇಂತಹ ಅಧಿಕಾರವನ್ನು ಇಲ್ಲಿಯವರೆಗೂ ಸ್ಥಳೀಯ ಆಡಳಿತದ ಚುನಾಯಿತ ಮುಖ್ಯಸ್ಥರಾದ ಅಧ್ಯಕ್ಷರಿಗೂ ನೀಡಲಾಗಿತ್ತು. ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಟಾನ, ಹಣಕಾಸಿನ ನಿಧಿ, ಪಂಚಾಯಿತಿ ತೆರಿಗೆ, ಖರ್ಚು– ವೆಚ್ಚಗಳ ಎಲ್ಲ ಚೆಕ್‌ಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು. ಈಗ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಅಧ್ಯಕ್ಷರ ಸಹಿ ಅಧಿಕಾರ ಹಿಂಪಡೆಯಲು ಹೊಸದಾಗಿ ನಡಾವಳಿ ರೂಪಿಸಿದೆ.

ಅಧ್ಯಕ್ಷರ ಅಧಿಕಾರ ಮೊಟಕು ಏಕೆ?:ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ಪಟ್ಟಿ ಮಾಡಿದೆ. ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಬಿಲ್ ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಲವು ಪ್ರಕರಣಗಳಲ್ಲಿ ವಿಳಂಬವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದ್ದು, ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ, ಎಸ್‌ಡಿಎಎ ನಿರ್ವ ಹಿಸಬೇಕು. ಒಂದು ವೇಳೆ ಪಂಚಾಯಿತಿಗಳಲ್ಲಿ ಎಸ್‌ಡಿಎಎ ಸ್ಥಾನ ಖಾಲಿ ಇದ್ದರೆ, ಪಿಡಿಒ ಜತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ.

ತೆರಿಗೆ ನಿರ್ಧಾರ ಹೊಣೆಗಾರಿಕೆಯೂ ಮೊಟುಕು: ಇದುವರೆಗೂ ಗ್ರಾಮ ಪಂಚಾಯಿತಿ ನಿರ್ಣಯ ತೆಗೆದುಕೊಂಡ ನಂತರ, ಪಂಚಾಯಿತಿ ನಿರ್ಣಯ ಸಂಖ್ಯೆ, ದಿನಾಂಕ ನಮೂದಿಸಿ ಇ–ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧಾರ ಪಟ್ಟಿಗಳನ್ನು ವಿತರಿಸಲಾಗುತ್ತಿತ್ತು. ಪಂಚಾಯಿತಿ ಸಭೆಗಳು ಕಾಲಕಾಲಕ್ಕೆ ನಡೆಯದ ಕಾರಣ, ನಮೂನೆ ವಿತರಿಸುವ ಸಂಪೂರ್ಣ ಅಧಿಕಾರವನ್ನು ಪಿಡಿಒಗಳಿಗೇ ನೀಡಲಾಗಿದೆ.ರಾಜ್ಯದಲ್ಲಿ 5,963 ಗ್ರಾಮ ಪಂಚಾಯಿತಿಗಳಿದ್ದು, 91,437 ಗ್ರಾಮ ಪಂಚಾಯಿತಿ ಸದಸ್ಯರು ಇದ್ದಾರೆ.

ಬಾಕ್ಸ್

ಸದಸ್ಯರ ಅಧಿಕಾರವೂ ಮೊಟಕು

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೃಹ, ವಾಣಿಜ್ಯ ಕಟ್ಟಡ ಕಾಮಗಾರಿಗಳು, ಕೈಗಾರಿಕೆ, ಗಣಿಗಾರಿಕೆ, ಅಂಗಡಿ, ಹೋಟೆಲ್ ಮತ್ತಿತರ ವಾಣಿಜ್ಯ ವಹಿವಾಟು ಗಳ ಆರಂಭಕ್ಕೆ ಪರವಾನಗಿ, ಇ–ಸ್ವತ್ತು (ನಮೂನೆ–9, 11ಎ, 11ಬಿ) ನೀಡುವ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು. ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಪರವಾನಗಿ ನೀಡುವ ಅಧಿಕಾರವನ್ನು ಪಿಡಿಒಗಳಿಗೆ ನೀಡ ಲಾಗಿದೆ. ನೀಡಿದ ನಂತರ ಸಭೆಯ ಗಮನಕ್ಕೆ ತರಲೂ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಸಭೆಗಳು ಸಕಾಲದಲ್ಲಿ ನಡೆಯದ ಕಾರಣ ವಿಳಂಬ ತಪ್ಪಿಸಲು ಇಂತಹ ಕ್ರಮ ಅನಿವಾರ್ಯ ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.