ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗ ಕೆಲಸದ ದಿನ ಹೆಚ್ಚಿಸಲು ರಾಜ್ಯ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್‌

Published 10 ನವೆಂಬರ್ 2023, 16:08 IST
Last Updated 10 ನವೆಂಬರ್ 2023, 16:08 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗ) ಯೋಜನೆಯ ಕೆಲಸ ದಿನಗಳಲ್ಲಿ ತಲಾ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯ ಸರ್ಕಾರವೇ ಆ ನಿರ್ಧಾರ ಕೈಗೊಳ್ಳಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ ನರೇಗ ಯೋಜನೆಯ ಕೆಲಸದ ದಿನಗಳನ್ನು 150 ದಿನಗಳಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಈ ವಿಷಯದಲ್ಲಿ ಒತ್ತಡ ಹೇರಬೇಕಾದ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಬರ ಅಧ್ಯಯನದ ನಾಟಕ ಮಾಡುತ್ತಿದ್ದಾರೆ’ ಎಂದರು.

ಬರಗಾಲದ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗಿದೆ. ಕೆಲಸ ದಿನಗಳನ್ನು ಹೆಚ್ಚಿಸಲು ಸಾಧ್ಯವಿಲ್ಲದಿದ್ದರೆ ಕೇಂದ್ರ ಸರ್ಕಾರ ಅದನ್ನು ಸ್ಪಷ್ಟವಾಗಿ ತಿಳಿಸಬೇಕು. ರಾಜ್ಯ ಸರ್ಕಾರವೇ ಆ ನಿರ್ಧಾರವನ್ನು ಕೈಗೊಳ್ಳುವುದಕ್ಕೆ ಸಿದ್ಧವಾಗಿದೆ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಹೈಕೋರ್ಟ್‌ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಗಿದೆ. ನೋಂದಣಿ ಮಾಡಿಕೊಳ್ಳುವಂತೆ ಬೀದಿಬದಿ ವ್ಯಾಪಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT