ನವದೆಹಲಿ: ಮುಡಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಉನ್ನತ ನಾಯಕರನ್ನು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಉಭಯ ನಾಯಕರು ಭೇಟಿ ಮಾಡಲಿದ್ದಾರೆ. ಮುಡಾ ಹಗರಣ, ಆ ನಂತರದ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.