ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LSPolls: ಕಾಂಗ್ರೆಸ್‌ ಸಂಪರ್ಕಿಸಿದೆ, ನಾಳೆ ನಿರ್ಧಾರ ಪ್ರಕಟಿಸುತ್ತೇನೆ; ಡಿವಿಎಸ್

Published 18 ಮಾರ್ಚ್ 2024, 11:21 IST
Last Updated 18 ಮಾರ್ಚ್ 2024, 11:21 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಸಂಸದ ಡಿ.ವಿ.ಸದಾನಂದಗೌಡ ಅವರನ್ನು ಕಾಂಗ್ರೆಸ್‌ ಸಂಪರ್ಕಿಸಿದ್ದು,  ತಮ್ಮ ನಿರ್ಧಾರವನ್ನು ನಾಳೆ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

‘ಈ ಬಾರಿ ಚುನಾವಣೆ ಸ್ಪರ್ಧಿಸುವುದಿಲ್ಲ’ ಎಂದು ಹೇಳಿದ್ದ ಡಿ.ವಿ.ಸದಾನಂದಗೌಡ ಅವರನ್ನು ಬಿಜೆಪಿಯ ಕೆಲವು ನಾಯಕರೇ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ತಾವೂ ಟಿಕೆಟ್‌ ಆಕಾಂಕ್ಷಿ ಎಂದು ಹೇಳಿಕೊಂಡಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ಘೋಷಿಸಿದ ಬೆನ್ನಲ್ಲೇ ಸದಾನಂದಗೌಡರು ಮುನಿಸಿಕೊಂಡಿದ್ದಾರೆ. ‘ತಮಗೆ ಟಿಕೆಟ್‌ ತಪ್ಪಿದ ಕಾರಣ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ‘ ಎಂದು ದೂರಿದ್ದ ಗೌಡರು, ಇದೀಗ ತಮ್ಮ ಮುಂದಿನ ರಾಜಕೀಯ ನಡೆಯನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸುವುದಾಗಿ ಹೇಳಿದ್ದಾರೆ.

‘ಬಿಜೆಪಿ ನಾಯಕರು ನಿನ್ನೆ ನನ್ನ ಮನೆಗೆ ಬಂದಿದ್ದರು. ನನ್ನ ಮನವೊಲಿಸಲು ಪ್ರಯತ್ನಿಸಿದರು. ನನ್ನ ಕುಟುಂಬದ ಸದಸ್ಯರ ಜತೆ ಚರ್ಚೆ ನಡೆಸಬೇಕಾಗಿದೆ. ಕಾಂಗ್ರೆಸ್‌ ನಾಯಕರೂ ನನ್ನನ್ನು ಸಂಪರ್ಕಿಸಿದ್ದರು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT