ಹುಣಸೂರು: ‘ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ವಿನಾಕಾರಣ ದೌರ್ಜನ್ಯ ಮತ್ತು ಅತ್ಯಾಚಾರಗಳು ನಡೆದಿದ್ದು, ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ನೊಂದ ಕುಟುಂಬದವರಿಗೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿ ದಸಂಸ ವತಿಯಿಂದ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.

ದಸಂಸ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಮಹದೇವಮ್ಮ ಮಾತನಾಡಿ, ‘ರಾಜ್ಯದ ಬೀದರ್ ಮತ್ತು ಶಿವಮೊಗ್ಗ ಸೇರಿದಂತೆ ಬಹುತೇಕ ಸ್ಥಳದಲ್ಲಿ ದಲಿತ ಸಮುದಾಯದವರ ಮೇಲೆ ವಿನಾಕಾರಣ ದೌರ್ಜನ್ಯ ನಡೆದಿದೆ. ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನಲ್ಲಿ ಕಬಡ್ಡಿ ಆಟಗಾರ್ತಿಯಾಗಿದ್ದ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ. ಇದಲ್ಲದೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಕಾಲೊನಿ ನಿವಾಸಿಗರು ನಿತ್ಯ ಬಳಸುತ್ತಿದ್ದ ರಸ್ತೆಯನ್ನು ಬಂದ್ ಮಾಡಿ ಅಮಾನವಿಯರಂತೆ ವರ್ತಿಸುತ್ತಿರುವ ಮೇಲ್ವರ್ಗದವರ ವಿರುದ್ಧ ಸ್ಥಳೀಯ ಆಡಳಿತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ದರೂ ದಲಿತ ಸಮುದಾಯದವರಿಗೆ ಮೂಲಭೂತ ಸವಲತ್ತು ಕಲ್ಪಿಸುವ ಆಳುವ ಸರ್ಕಾರಗಳು ವೇದಿಕೆ ಯಲ್ಲಿ ಹೇಳಿಕೆಗೆ ಸೀಮಿತವಾಗಿದ್ದು, ಇಂದಿಗೂ ಎರಡು ಹೊತ್ತು ಅನ್ನ ಇಲ್ಲದ ದಲಿತ ಸಮುದಾಯದವರು ಅತಂತ್ರ ಬದುಕು ನಡೆಸಿದ್ದಾರೆ. ಸಮಾಜ ಕಲ್ಯಾಣ ಸಚಿವಾಲಯ ಈ ಎಲ್ಲಾ ಕ್ರೂರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು ಕ್ರೂರ ಮನಸ್ಸುಗಳಿಗೆ ಕಾನೂನು ಚೌಕಟ್ಟಿನಲ್ಲಿ ತಕ್ಕ ಪಾಠ ಕಲಿಸಿ ಭವಿಷ್ಯದಲ್ಲಿ ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಬೇಕು’ ಎಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ‘ಜಿಲ್ಲಾಧಿಕಾರಿ ಮೂಲಕ ಮನವಿಯನ್ನು ರವಾನಿಸುವ ಭರವಸೆ ನೀಡಿದರು.

ಕೊಳಗಟ್ಟ ಕೃಷ್ಣ, ಅಹಿಂದ ಜಾಗೃತ ವೇದಿಕೆ ನಗರಾಧ್ಯಕ್ಷ ಸೋಮಣ್ಣ ವೇಣು, ಚಿಕ್ಕಹುಣಸೂರು ರಾಜು, ಜೆ. ಮಹದೇವ್, ಗಿರಿಜಮ್ಮ , ವೀಣಾ, ಪ್ರಭಾವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-1591016694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.