ಬೆಂಗಳೂರು: ‘ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ. ದಲಿತ ಮುಖಂಡಡ ವೇಷದಲ್ಲಿ ಇಲಾಖೆಯ ಒಳಗೆ ಈ ಮಧ್ಯವರ್ತಿಗಳು ಮೆರೆಯುತ್ತಿದ್ದು, ಈ ಹಾವಳಿಗೆ ತಕ್ಷಣ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದ್ದಾರೆ.

‘ಹಿರಿಯ ಅಧಿಕಾರಿಗಳೇ ಮಧ್ಯವರ್ತಿಗಳಿಗೆ ಮಣೆ ಹಾಕುತ್ತಿದ್ದಾರೆ. ವಿವಿಧ ಯೋಜನೆಗಳ ನೆರವು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಈ ವ್ಯವಸ್ಥೆ ಮುಂದುವರಿದರೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸಮಾಜ ಕಲ್ಯಾಣ ಇಲಾಖೆ ಉಳಿಸಿ’ ಎಂಬ ಅಭಿಯಾನದೊಂದಿಗೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ’ ಎಂದೂ ಈ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

‘ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಕುಳಿತುಕೊಂಡು, ತಮಗೆ ಬೇಕಾದಂತೆ ಯೋಜನೆಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿದ್ದಾರೆ. ಇಲಾಖೆಯ ಆಯುಕ್ತರ ಮತ್ತು ಸಚಿವಾಲಯದ ಕಚೇರಿಯಲ್ಲಿ ಎಗ್ಗಿಲ್ಲದೆ ಮೆರೆಯುತ್ತಿರುವ ಮಧ್ಯವರ್ತಿಗಳಿಗೆ ಕಡಿವಾಣ ಹಾಕಲೇಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕರ್ನಾಟಕ ನವ ಜಾಗೃತಿ ವೇದಿಕೆಯ ಅಧ್ಯಕ್ಷ ಅನಂತರಾಯಪ್ಪ, ಆದಿಜಾಂಬವ ಸಂಘದ ಅಧ್ಯಕ್ಷ ಸಿ. ಸಿದ್ದರಾಜು, ಸಮತಾ ಸೈನಿಕ ದಳದ ಅಧ್ಯಕ್ಷ ಎಂ. ವೆಂಕಟಸ್ವಾಮಿ, ದಲಿತ ಸಂಘರ್ಷ ಸಮಿತಿ (ಸಮತಾವಾದ) ಅಧ್ಯಕ್ಷ ಎಚ್. ಮಾರಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಭೀಮವಾದ) ಮಾವಳ್ಳಿ ಶಂಕರ್, ವಿವಿಧ ಸಂಘಟನೆಗಳ ಪ್ರಮುಖರಾದ ಬಿ.ಜಿ. ವೆಂಕಟರಾಜು, ಸಿ.ಜಿ. ಶ್ರೀನಿವಾಸ್, ಆರ್. ಮೋಹನ್ ರಾಜ್ ಮುಂತಾದವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.