ಬೆಂಗಳೂರು: ನಿರಶನನಿರತ ರೈತ ಜಗಜೀತ್ ಸಿಂಗ್ ದಲ್ಲೇವಾಲ್ ಅವರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಬಿ.ಆರ್. ಪಾಟೀಲ ಅವರು ಏಕಾಂಗಿಯಾಗಿ ಶನಿವಾರ ಪ್ರತಿಭಟನೆ ನಡೆಸಿದರು.

ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲ್ಲೇವಾಲ್ ನ. 26ರಿಂದ ಪಂಜಾಬ್–ಹರಿಯಾಣ ಗಡಿಯಲ್ಲಿ ನಿರಶನ ನಡೆಸುತ್ತಿದ್ದಾರೆ.

‘ದಲ್ಲೇವಾಲ್ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ. ಆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ’ ಎಂದು ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ದಲ್ಲೇವಾಲ್ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಸರ್ಕಾರ ದಲ್ಲೇವಾಲ್ ಅವರ ಹಕ್ಕೊತ್ತಾಯಕ್ಕೆ ತಕ್ಷಣ ಸ್ಪಂದಿಸಬೇಕು. ಎಂಎಸ್ಪಿ ಕಾನೂನು ರಕ್ಷಣೆ ನೀಡಿ ರೈತರನ್ನೂ ಉಳಿಸಬೇಕು ಎಂದೂ ಆಗ್ರಹಿಸಿದರು.

ಬಿ.ಆರ್. ಪಾಟೀಲ ಅವರಿಗೆ ರೈತ ಹೋರಾಟಗಾರ ವೀರಸಂಗಯ್ಯ ಬೆಂಬಲ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.