ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಟ ದರ್ಶನ್ ವಿಚಾರವಾಗಿ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ

Published 20 ಜೂನ್ 2024, 16:12 IST
Last Updated 20 ಜೂನ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ನಟ ದರ್ಶನ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಚಿವರು ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನಕ್ಕೊಳಗಾಗಿರುವ ವಿಚಾರವನ್ನು ಪ್ರಸ್ತಾಪಿಸಲು ಒಂದಿಬ್ಬರು ಸಚಿವರು ಪ್ರಯತ್ನಿಸಿದಾಗ ಸಿದ್ದರಾಮಯ್ಯ ಅದಕ್ಕೆ ಅವಕಾಶ ನೀಡಲಿಲ್ಲ ಮತ್ತು ಯಾರೂ ಈ ವಿಚಾರವಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಉಪಸಮಿತಿ ರಚನೆ

ರಾಜ್ಯದ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲು ಸಂಪುಟ ಸಮಿತಿಯನ್ನು ರಚಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT