ಬೆಂಗಳೂರು: 'ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ, 'ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನಿಸಲಿದೆ' ಎಂದರು.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, 'ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ' ಎಂದು ಹರಿಹಾಯ್ದರು.

ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ: 'ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ' ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, 'ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ. ಅವರು ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ?' ಎಂದು ಪ್ರಶ್ನಿಸಿದರು.
.ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿ ಪ್ರತಾಪ್ ಸಿಂಹ ಪಿಐಎಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.