ದಾವಣಗೆರೆ: ಬೆಲೆ ಏರಿಕೆಯ ಮೂಲಕ ಜನರ ಜೇಬುಗಳಿಂದ ಹಣವನ್ನು ಕದಿಯುವ ಬಿಜೆಪಿಯು ರಾಜ್ಯಕ್ಕೆ ಅಪಾಯಕಾರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದರು.

ನಗರದ ಎಪಿಎಂಸಿ ಆವರಣದಲ್ಲಿ ಪಂಚಗ್ಯಾರಂಟಿ ಯೋಜನೆಯ ಫಲಾನುಭವಿಗಳೊಂದಿಗೆ ಶನಿವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಗ್ಯಾರಂಟಿ ಮಾದರಿ ಅನುಸರಿಸುತ್ತಿದೆ. ಜನಕಲ್ಯಾಣ ಹಾಗೂ ಮಹಿಳಾ ಸಬಲೀಕರಣಕ್ಕೆ ಆರ್ಥಿಕ ನೆರವು ನೀಡುತ್ತಿದೆ. ದೇಶದ ಜನರ ಜೇಬುಗಳನ್ನು ಕತ್ತರಿಸುವ ಮೋದಿ ಅವರ ಮಾದರಿಯನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.

‘2023ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ‘ಪಂಚಗ್ಯಾರಂಟಿ’ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತು. ಈ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ ಎಂಬುದಾಗಿ ಬಿಜೆಪಿ ನಾಯಕರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದರು. ಅಧಿಕಾರಕ್ಕೆ ಬಂದ ಕಾಂಗ್ರೆಸ್, ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ’ ಎಂದರು.

‘ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹ 56,000 ಕೋಟಿಯನ್ನು ರಾಜ್ಯ ಸರ್ಕಾರ ಜಮಾ ಮಾಡುತ್ತಿದೆ. ಇದು ಮಹಿಳಾ ಕೇಂದ್ರಿತ ರಾಜ್ಯವಾಗಿದ್ದು, ಸ್ತ್ರೀ ಸಬಲೀಕರಣಕ್ಕೆ ಒತ್ತು ನೀಡಿದೆ. ಇಂತಹ ಕಾರ್ಯ ಕಳೆದ 78 ವರ್ಷಗಳಲ್ಲಿ ದೇಶದ ಯಾವುದೇ ಭಾಗದಲ್ಲಿ ನಡೆದಿಲ್ಲ. ಈ ಯೋಜನೆಗಳಿಗೆ ರಾಜ್ಯ ಸರ್ಕಾರವು ಈವರೆಗೆ ₹ 1.31 ಲಕ್ಷ ಕೋಟಿ ವೆಚ್ಚ ಮಾಡಿದೆ’ ಎಂದು ವಾಗ್ದಾಳಿ ನಡೆಸಿದರು.

‘ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಅಡುಗೆ ಅನಿಲ, ಉಕ್ಕು, ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಿಂದ ಕೇಂದ್ರ ಸರ್ಕಾರ ₹ 23,000 ಕೋಟಿ ಸಂಗ್ರಹಿಸಿದೆ. ಎಸಿ, ರೆಫ್ರಿಜರೇಟರ್, ಸೋಪು, ಮ್ಯಾಗಿ ಪ್ಯಾಕೆಟ್ಗಳು ಶೀಘ್ರದಲ್ಲೇ ದುಬಾರಿಯಾಗಲಿವೆ’ ಎಂದು ಕಿಡಿಕಾರಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-43-744467499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.