ದಾವಣಗೆರೆ: ‘ಉಚಿತ ಕೊಡುಗೆಗಳ ಮೂಲಕ ಮತದಾರರ ಸೆಳೆಯಲು ಪ್ರಯತ್ನಿಸಿದ ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಬಂದಿರುವ ಸ್ಥಿತಿ 2028ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಬರಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಪರಾಜಿತ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

‘ಗೃಹ ಲಕ್ಷ್ಮಿ’ ಗ್ಯಾರಂಟಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿದೆ. ಚುನಾವಣೆ ಸಂದರ್ಭದಲ್ಲಿ ಆಯಾ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಆಗುತ್ತದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಮುಂದಿನ ಕಂತು ಪಾವತಿ ಆಗಲಿದೆ. ಈ ‘ಭಾಗ್ಯ’ಗಳೇ ಕಾಂಗ್ರೆಸ್ಗೆ ಮುಳುವಾಗಲಿವೆ’ ಎಂದರು.

‘ದಕ್ಷಿಣ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವ ಅತೀವ ವಿಶ್ವಾಸವಿತ್ತು. ಕ್ಷೇತ್ರದಲ್ಲಿ 70,000 ಮತ ಗಳಿಸುವ ಗುರಿ ಹೊಂದಲಾಗಿತ್ತು. ಮತದಾನದ ದಿನ ಸಮೀಪಿಸಿದಾಗ ಇನ್ನಷ್ಟು ಪ್ರಯತ್ನ ಅಗತ್ಯವಿತ್ತು. ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ಕಮಲ ಅರಳುವ ಸಮಯ ಬರಲಿದೆ’ ಎಂದರು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1805512833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.